Clearing trees obstructing power lines: HESCOM workers service despite heavy rains

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ಮುದ್ದೇಬಿಹಾಳ: ಪಟ್ಟಣದ ಕೆಜಿಎಸ್ ನಂ.2 ಶಾಲೆಯ ಆವರಣದಲ್ಲಿದ್ದ ಬೃಹತ್ ಆಲದ ಮರದ ರೆಂಬೆ ಕೊಂಬೆಗಳು ಬಜಾರ್‌ದಲ್ಲಿ ಅಂಗಡಿಗಳಿಗೆ ಸಂಪರ್ಕ ಇದ್ದ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಕಾರಣ ಅದನ್ನು ಭಾನುವಾರ ಹೆಸ್ಕಾಂ ಕಾರ್ಮಿಕರು ಸುರಿಯುವ ಮಳೆಯನ್ನೂ ಲೆಕ್ಕಿಸದೇ ತೆರವುಗೊಳಿಸುವ ಕಾರ್ಯ ಕೈಗೊಂಡರು.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಂಗಡಿಗಳಿಗೆ ಈ ಮರದ ಅಕ್ಕಪಕ್ಕದ ವಿದ್ಯುತ್ ಕಂಬಗಳಿಂದ ಸಂಪರ್ಕ ನೀಡಲಾಗಿದ್ದು ಮಳೆ, ಗಾಳಿ ಬಿಟ್ಟರೆ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಮರದ ರೆಂಬೆ ಕೊಂಬೆಗಳನ್ನು ಮರದ ಅರ್ಧ ಭಾಗವನ್ನು ಕತ್ತರಿಸಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗಿದ್ದ ಮರದ ಬೃಹತ್ ರೆಂಬೆಯನ್ನು ತೆರವುಗೊಳಿಸಲಾಯಿತು.

ಸಂಜೆ ಸಮಯದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದರೂ ತಂತಿಗಳನ್ನು ಜೋಡಿಸುವ ಕಾರ್ಯವನ್ನು ಹೆಸ್ಕಾಂ ನೌಕರರು, ಗುತ್ತಿಗೆ ನೌಕರರು ಕೈಗೊಂಡರು. ಹೆಸ್ಕಾಂ ಪ್ರಭಾರ ಸೆಕ್ಷನ್ ಅಧಿಕಾರಿ ನಾಗರಾಜ ಬಸರಕೋಡ, ಗುತ್ತಿಗೆದಾರ ಅಪ್ಪುಗೌಡ ಮಾಡಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮುದ್ದೇಬಿಹಾಳದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು