CLP Meeting

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿರುವುದು ಬಹಿರಂಗವಾಗಿ ಎಲ್ಲೆಡೆ ಚರ್ಚೆಯಾಗುತ್ತಿದೆ. ಡಿಸಿಎಂ ಸೇರಿದಂತೆ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಜರಿದ್ದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮತ್ತು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡುಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್‌. ಬೋಸರಾಜು ನಡುವೆ ಉನ್ನತ ಪೊಲೀಸ್ ಅಧಿಕಾರಿಯೋರ್ವರ ವರ್ಗಾವಣೆ ಸಂಬಂಧಿಸಿದಂತೆ ಉಭಯ ಸಚಿವರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎರೆಡು ಬಣಗಳಿವೆ ಎಂಬುದು ಗುಟ್ಟಾಗಿ ಉಳಿದಿಲ್ಲ ಸರ್ಕಾರ ರಚನೆ ನಂತರ ಸಚಿವ ಸಂಪುಟದಲ್ಲಿ ಸೇರ್ಪಡೆ, ನಿಗಮ- ಮಂಡಳಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ, ನಾಮನಿರ್ದೇಶನ ಸದಸ್ಯರ, ಗ್ಯಾರಂಟಿ ಅನುಷ್ಟಾನ ಸಮಿತಿಯ ನೇಮಕ ಸಂದರ್ಭ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ ಎಷ್ಟರ ಮಟ್ಟಿಗೆ ಇದು ಮುಟ್ಟಿದೆ ಎಂದರೆ ಕಾರ್ಯಕ್ರಮವೊಂದರಲ್ಲಿ ಮಹಾನಗರ ಪಾಲಿಕೆ ಮಹಾಪೌರರ ಹೆಸರು ಹೇಳುವುದನ್ನು ಸಚಿವರು ಉದ್ಧೇಶ ಪೂರ್ವಕವಾಗಿ ಬಿಟ್ಟಿದ್ದಾರೆ ಎಂಬುದು ಅಸಮಾಧಾನಕ್ಕೆ ಆಸ್ಪದ ನೀಡಿತ್ತು.

ಅಡಿಯಿಂದ ಮುಡಿಯವರೆಗೆ ಬಣ ರಾಜಕೀಯ ಕಲಹ ನಡೆಯುತ್ತಾ ಸಾಗಿದೆ ಹೈಕಮಾಂಡ್ ಈ ಬಗ್ಗೆ ಅಸಹಾಯಕ ಸ್ಥಿತಿಯಲ್ಲಿದೆ ಎಂಬ ಅನುಮಾನ ಪಕ್ಷದ ತಟಸ್ಥ ಕಾರ್ಯಕರ್ತರಲ್ಲಿ ಮೂಡಿದೆ. ಬಣ ರಾಜಕೀಯಕ್ಕೆ ನಾಂದಿ ಹಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಪ್ರಮುಖ ಕಾರಣವಾಗಿದೆ ‌ಸ್ಥಳೀಯ ಸಚಿವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡದೆ ಅನ್ಯ ಜಿಲ್ಲೆಯವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದರಿಂದ ಬಣ ರಾಜಕೀಯ ಸಂಘರ್ಷ ಬೂದಿ ಮುಚ್ಚಿದ ಕೆಂಡದಂತಿದೆ ಕೆಲವೊಮ್ಮೆ ಅದು ಧಗಧಗನೆ ಉರಿಯುತ್ತದೆ.

ಬಣ ಬೆಂಕಿ ನಂದಿಸಲು ಸಾಧ್ಯವಾಗದೆ ಪಕ್ಷಕ್ಕೆ ಮುಜುಗರಕ್ಕೀಡು ಮಾಡುವ ಸನ್ನಿವೇಶ ಎದುರುಗಾತ್ತಿರುತ್ತದೆ ನಿನ್ನೆ ನಡೆದಿದೆ ಎನ್ನಲಾದ ಸಚಿವರ ನಡುವಿನ ಜಟಾಪಟಿಗೆ ವರ್ಗಾವಣೆ ಒಂದು ಕಾರಣವೆಂದು ಹೇಳಲಾಗುತ್ತಿದ್ದರೂ ಆಂತರಿಕವಾಗಿ ಜಿಲ್ಲೆಯಲ್ಲಿ ಹಿಡಿತ ಸಾಧಿಸುವುದಕ್ಕಾಗಿ ಎನ್ನುವುದು ರಾಜಕೀಯ ವಲಯದಿಂದ ಕೇಳಿಬರುತ್ತಿದೆ

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ