ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಂಠಪಾಠ,ಧಾರ್ಮಿಕ ಪಠಣ, ಛದ್ಮವೇಷ,ಕಥೆ ಹೇಳುವುದು,ದೇಶಭಕ್ತಿಗೀತೆ,ಚಿತ್ರಕಲೆ,ಅಭಿನಯ ಗೀತೆ, ಕ್ಲೇ ಮಾಡಲಿಂಗ್, ಭಕ್ತಿಗೀತೆ,ಆಶುಭಾಷಣ,ಪ್ರಬಂಧ ರಚನೆ,ಮಿಮಿಕ್ರಿ,ಜಾನಪದ ನೃತ್ಯ, ಕ್ವಿಜ್,ಕವ್ವಾಲಿ,ಜನಪದಗೀತೆ ಸ್ಪರ್ಧೆಗಳಲ್ಲಿ ಶಾಲೆಯ 30 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಒಟ್ಟು 11 ಶಾಲೆಗಳ ಮಕ್ಕಳು ಭಾಗವಹಿಸಿದ್ದವು.ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಬಿಆರ್‌ಸಿ ಆರ್.ಬಿ.ಧಮ್ಮೂರಮಠ,ಅಕ್ಷರದಾಸೋಹ ಅಧಿಕಾರಿ ಎಂ.ಎA.ಬೆಳಗಲ್,ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್,ಇದ್ದರು.







