CM, DCM high level meeting in Delhi.. What is the next step

ದೆಹಲಿಯಲ್ಲಿ CM, DCM ಉನ್ನತ ಮಟ್ಟದ ಸಭೆ.. ಮುಂದಿನ ನಡೆ ಏನು?

ದೆಹಲಿಯಲ್ಲಿ CM, DCM ಉನ್ನತ ಮಟ್ಟದ ಸಭೆ.. ಮುಂದಿನ ನಡೆ ಏನು?

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೂಡ ಪ್ರಕರಣದ ಕುರಿತು ಮಾತುಕತೆ ನಡೆಸಿದ್ದಾರೆ.

Join Our Telegram: https://t.me/dcgkannada

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಉಪಸ್ಥಿತರಿದ್ದರು.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದ ಕುರಿತು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಾಪಾಲರು ತನಿಖೆಗೆ ಅನುಮತಿ ನೀಡಿರುವ ಕುರಿತು ಮುಂದಿನ ಕಾನೂನು ನಡೆ ಬಗ್ಗೆ ಚರ್ಚಿಸಲಾಗಿದೆ. ಮುಡಾದಲ್ಲಿ ನನ್ನ ಪಾತ್ರವಿಲ್ಲ. ಕಾನೂನು ರೀತಿಯಲ್ಲಿ 14 ಸೈಟ್ ಪಡೆದಿದ್ದೇವೆ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೇ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಿಂದಿನ ಹಗರಣಗಳ ಕುರಿತಾಗಿ ಮತ್ತು ರಾಜ್ಯಪಾಲರ ಬಳಿ ದೋಸ್ತಿ ನಾಯಕರ ಕೆಲ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಬಾಕಿ ಇರುವ ಸಂಗತಿಗಳನ್ನು ರಾಜ್ಯ ನಾಯಕರು ವರಿಷ್ಠರಿಗೆ ವರದಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Who after modi? ಮೋದಿ ನಂತರ ಪ್ರಧಾನಿ ಯಾರು..? ಸಮೀಕ್ಷೆ ಬಹಿರಂಗ..!

ಇನ್ನು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಖಂಡಿಸಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆ ವಿರೋಧಿಸಿ ಕೈಗೊಂಡ ಸಂಪುಟ ನಿರ್ಣಯಗಳ ಬಗ್ಗೆ ವರಿಷ್ಠರಿಗೆ ರಾಜ್ಯ ನಾಯಕರು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ