ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೂಡ ಪ್ರಕರಣದ ಕುರಿತು ಮಾತುಕತೆ ನಡೆಸಿದ್ದಾರೆ.
Join Our Telegram: https://t.me/dcgkannada
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಉಪಸ್ಥಿತರಿದ್ದರು.
ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದ ಕುರಿತು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಾಪಾಲರು ತನಿಖೆಗೆ ಅನುಮತಿ ನೀಡಿರುವ ಕುರಿತು ಮುಂದಿನ ಕಾನೂನು ನಡೆ ಬಗ್ಗೆ ಚರ್ಚಿಸಲಾಗಿದೆ. ಮುಡಾದಲ್ಲಿ ನನ್ನ ಪಾತ್ರವಿಲ್ಲ. ಕಾನೂನು ರೀತಿಯಲ್ಲಿ 14 ಸೈಟ್ ಪಡೆದಿದ್ದೇವೆ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೇ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಿಂದಿನ ಹಗರಣಗಳ ಕುರಿತಾಗಿ ಮತ್ತು ರಾಜ್ಯಪಾಲರ ಬಳಿ ದೋಸ್ತಿ ನಾಯಕರ ಕೆಲ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಬಾಕಿ ಇರುವ ಸಂಗತಿಗಳನ್ನು ರಾಜ್ಯ ನಾಯಕರು ವರಿಷ್ಠರಿಗೆ ವರದಿ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Who after modi? ಮೋದಿ ನಂತರ ಪ್ರಧಾನಿ ಯಾರು..? ಸಮೀಕ್ಷೆ ಬಹಿರಂಗ..!
ಇನ್ನು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಖಂಡಿಸಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆ ವಿರೋಧಿಸಿ ಕೈಗೊಂಡ ಸಂಪುಟ ನಿರ್ಣಯಗಳ ಬಗ್ಗೆ ವರಿಷ್ಠರಿಗೆ ರಾಜ್ಯ ನಾಯಕರು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.