ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ವಿಜಯಪುರ : ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವೀರರಾಣಿ ಕಿತ್ತೂರ ಚೆನ್ನಮ್ಮನವರ ಪುತ್ಥಳಿ ಅನಾವರಣ ಸೇರಿದಂತೆ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಇಂದು ನಗರದ ವಿ.ಬಿ ದರ್ಬಾರ ಮೈದಾನದ ಆವರಣದಲ್ಲಿ ನಡೆಯಲಿದೆ.
ಇಂದು ಬೆಳಿಗ್ಗೆ 11:45ಕ್ಕೆ ನಡೆಯುವ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಹಾಗೂ ಜಲ ಸಂಪನ್ಮೂಲ ಸಚಿವರು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ. ಕೆ. ಶಿವಕುಮಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರುಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ನಗರದ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಗುಂಡೂರಾವ್, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೆಗೌಡ, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ. ಝಡ್ ಜಮೀರ್ ಅಹ್ಮದಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್.
ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನೆ (ಕೆಯುಡಬ್ಲ್ಯೂಎಸ್ ಡಿಬಿ/ಕೆಯುಐಡಿಎಫ್‌ಸಿ) ಸಚಿವರಾದ ಸುರೇಶ.ಬಿ.ಎಸ್ ಉನ್ನತ ಶಿಕ್ಷಣ ಸಚಿಮಾದ ಡಾ.ಎಂ.ಸಿ. ಸುಧಾಕರ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ವಿಧಾನ ಪರಿಪತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್. ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ-2 ಹಾಗೂ ಶಾಸದಕರಾದಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆರ್ಂಟ್‌ನ ಅಧ್ಯಕ್ಷರೂ ಆದ ಶಾಸಕರಾದ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವಿ ಪಾಟೀಲ, ಹಣಮಂತ ಆರ್. ನಿರಾಣಿ,ಸುನೀಲಗೌಡ,ಬಿ. ಪಾಟೀಲ, ಪಿ.ಹೆಚ್.ಪೂಜಾರ, ವಿಠಲ ಕಟಕಧೋಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್. ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ. ಎಸ್. ಕವಲಗಿ, ಕಲಬುರ್ಗಿ ಕ.ಕ.ರ.ಸಾ.ನಿಗಮದ ಅಧ್ಯಕ್ಷರಾದ ಅರುಣಕುಮಾರ ಎಂ. ವೈ. ಪಾಟೀಲ, ಮಹಾನಗರ ಪಾಲಿಕೆ ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇಂಧನ ಮತ್ತು ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ, ರಿತೇಶ್ ಕುಮಾರ ಸಿಂಗ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ ಕಟಾರಿಯಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಅಲ ಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ವಾಲ್, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಎನ್. ವಿ. ಪ್ರಸಾದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಿ. ರಂದೀಪ್, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಖುಷ್ಟೂ ಬಿ. ಚೌಧು, ನಗರಾಭಿವೃದ್ಧಿ ಇಲಾಖೆ (ನಗರಸಭೆ ಮತ್ತು ಮರಸಭೆಗಳು)ಸರ್ಕಾರದ ಕಾರ್ಯದರ್ಶಿಗಳಾದ ಶೀಮತಿ ದೀಪಾ ಚೋಳನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಾಕಾರಿ ನಿರ್ದೇಶಕರಾದ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ. ಕನಗವಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಜೆ.ಮಂಜುನಾಥ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಕೆ. ಎಂ. ಜಾನಕಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







