ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ವೇಳೆ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. (CM race)
Join Our Telegram: https://t.me/dcgkannada
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಗಳು ನಡೆಯುತ್ತಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. (CM race)
ಇದನ್ನೂ ಓದಿ: Viral video: ಭಾರತ ಬಂದ್ ವೇಳೆ ಜಿಲ್ಲಾಧಿಕಾರಿಗೆ ಬಿತ್ತು ಲಾಠಿ ಏಟು..! ವಿಡಿಯೋ ವೈರಲ್
ಮುಖ್ಯಮಂತ್ರಿಗಳ ಬೆನ್ನಿಗೆ ಹೈಕಮಾಂಡ್ ನಿಲ್ಲಲಿದೆ. ಈಗಾಗಲೇ ಹೈಕಮಾಂಡ್ ನಾಯಕರು ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ದೆಹಲಿಗೆ ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬೆಳವಣಿಗೆ ಕುರಿತು ಹೈಕಮಾಂಡ್‌ಗೆ ಮಾಹಿತಿ ನೀಡಲಿದ್ದಾರೆ. ಅದನ್ನು ಹೊರತುಪಡಿಸಿದರೆ ವಿಶೇಷವೇನೂ ಇಲ್ಲ ಎಂದು ಹೇಳಿದರು.
ಇನ್ನು, ರಾಜಭವನಕ್ಕೆ ನುಗ್ಗುವ ಬಗ್ಗೆ ಪಕ್ಷದ ಹಿರಿಯ ನಾಯಕ ಐವಾನ್ ಡಿಸೋಜಾ ಹೇಳಿದ್ದು ಸರಿಯಲ್ಲ. ಅವರ ಹೇಳಿಕೆಯನ್ನು ನಾವು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಕೆಲವೊಮ್ಮೆ ಅವರು ತಮ್ಮ ವೈಯಕ್ತಿಕ ಹೇಳಿಕೆ ನೀಡುತ್ತಾರೆ. ಐವಾನ್ ವಿರುದ್ಧ ದೂರು ದಾಖಲಿಸುವ ವಿಚಾರ ಬಿಜೆಪಿಗೆ ಬಿಟ್ಟದ್ದು ಎಂದು ಅವರು ಸ್ಪಷ್ಟಪಡಿಸಿದರು.