ಬೆಂಗಳೂರು: ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಎಂದು ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.
Join Our Telegram: https://t.me/dcgkannada
ಸಚಿವ ಸಂಪುಟದ ಸಭೆಯ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಂವಿಧಾನ ಬದ್ಧವಾಗಿ ನಡೆದುಕೊಂಡಿಲ್ಲ. ಆದ್ದರಿಂದ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮಯಿ ನೀಡಿರುವುದನ್ನು ಖಂಡಿಸಿ ಸಂಪುಟದಲ್ಲಿ ನಿರ್ಣಯ ಮಾಡಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಅಸ್ಥಿತಗೊಳಿಸಲು ಮುಂದಾಗಿದೆ. ಇದರಿಂದ ಫೆಡರಲ್ ವ್ಯವಸ್ಥೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ನಡೆದುಕೊಳ್ಳುವ ಮೂಲಕ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ (CM Siddaramaiah) ಆರೋಪಿಸಿದರು.
ಇದನ್ನೂ ಓದಿ: SBI ಗ್ರಾಹಕರಿಗೆ BIG ALERT..!!
ರಾಜ್ಯಪಾಲರ ಆದೇಶದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಾಗುವುದು. ತಮ್ಮ ಮೇಲೆ ರಾಜಭವನ ಬಳಕೆ ಸಲ್ಲ. ಬಡವರ ಪರ ಇರುವ ಸರ್ಕಾರ ಕೆಡವಲು ಈ ರೀತಿ ಮಾಡುತ್ತಿದ್ದಾರೆ ಎಂದು ಜರಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಇಕ್ಕಟಿಗೆ ಸಿಲುಕಿದ್ದು, ಮುಂದಿನ ನಡೆಯ ಕುರಿತು ಚರ್ಚಿಸಲು ಸಚಿವರ ದಂಡು ಸಿದ್ದರಾಮಯ್ಯ ಮನೆಗೆ ಆಗಮಿಸಿದರು.