ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah)ಗೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
ಹೌದು, ಸಿಎಂ ಸಿದ್ದರಾಮಯ್ಯ(CM SIDDARAMAIAH) ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
Join our Telegram: https://t.me/dcgkannada
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.
ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.
ವಿಚಾರಣೆ ಸಂದರ್ಭದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.