HDK vs Siddaramaiah: Union Minister HD Kumaraswamy arrested?

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.

ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.

ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.

ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ