BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ಮೈಸೂರು: ರಾಜಕೀಯ ಲಾಭಕ್ಕಾಗಿ BJP-JDS ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

BJP-JDSನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಈ ರೀತಿ ಪ್ರತಿಕ್ರಿಯೆ ನೀಡಿದರು.

Join Our Telegram: https://t.me/dcgkannada

ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ಇದನ್ನೂ ಓದಿ: CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

ರಾಜಕೀಯವಾಗಿ ಮಣಿಸಲು BJP JDS ತಂತ್ರ: ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ:
ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ, ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ