ಕುಸಿದ ಕಾಳಿ ಸೇತುವೆ: ಕಾರವಾರ-ಗೋವಾ ಸಂಚಾರ ಸ್ಥಗಿತ

ಕುಸಿದ ಕಾಳಿ ಸೇತುವೆ: ಕಾರವಾರ-ಗೋವಾ ಸಂಚಾರ ಸ್ಥಗಿತ

ಕಾರವಾರ: ಗೋವಾಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಾಳಿ ನದಿಯಲ್ಲಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆಂದು ವರದಿಯಾಗಿದೆ.

ಕಾರವಾರ‌ ಮತ್ತು ಗೋವಾ ನಡುವೆ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಮಂಗಳವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಕುಸಿದು ಬಿದ್ದಿದೆ.

ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಲಾರಿ ನದಿಗೆ ಬಿದ್ದಿದೆ. ತಕ್ಷಣ ಮೀನುಗಾರರು ಹಾಗೂ ಪೋಲಿಸರು ಲಾರಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.

ಗಾಯಗೊಂಡಿರುವ ವ್ಯಕ್ತಿಯನ್ನು ಕೇರಳ ಮೂಲದ 37 ವರ್ಷದ ರಾಧಾಕೃಷ್ಣ ನಾಳಾ ಸ್ವಾಮಿ ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇನ್ನು ಘಟನೆ ಸಂಭವಿಸುವ ವೇಳೆ ಬೈಕ್ ಹಾಗೂ ಕಾರು ಕೂಡ ಇದೇ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದ್ದು ಅವರು ಮುಂದೆ ಸಾಗಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಟ್ರಕ್ ನೀರಿನಲ್ಲಿ ಬಿದ್ದಿದ್ದು ಮತ್ತೆ ಯಾವುದಾದರೂ ವಾಹನ ಬಿದ್ದಿರುವ ಬಗ್ಗೆ ಸ್ಥಳೀಯ ಮೀನುಗಾರರ ಜೊತೆ ಪೊಲೀಸರು ದೋಣಿಗಳ ಮೂಲಕ ಹುಡುಕಾಟ ನಡೆಸಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ