Collector's visit to Muddebihal: Notice to provide better service to public

ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ

ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ

ಮುದ್ದೇಬಿಹಾಳ : ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಳ್ಳೆಯ ಸೇವೆ ನೀಡಬೇಕು. ಸಮಯ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಆನಂದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಅವರು ಅಲ್ಲಿನ ಆಡಳಿತ ವೈದ್ಯಾಧಿಕಾರಿ ಡಾ. ಅನಿಲಕುಮಾರ ಶೇಗುಣಸಿ ಅವರಿಂದ ಆಸ್ಪತ್ರೆಯ ಕುರಿತು ಮಾಹಿತಿ ಪಡೆದುಕೊಂಡರು. ಗರ್ಭಿಣಿಯರು, ಬಾಣಂತಿಯರು, ಔಷಧಿ ವಿಭಾಗ, ಹೊರರೋಗಿಗಳ ವಿಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಸುತ್ತಾಡಿದ ಡಿಸಿ ಅವರು ಆಸ್ಪತ್ರೆಯ ಸ್ವಚ್ಛತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದಲ್ಲದೇ ಮುದ್ದೇಬಿಹಾಳ ಪಟ್ಟಣದ ತಹಸೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು ಭೂಮಿ ಕೇಂದ್ರದ ಪ್ರಗತಿ, ಪೌತಿ ಆಂದೋಲನ ಮಾಹಿತಿ, ಸಕಾಲ ಅರ್ಜಿಗಳ ಪ್ರಗತಿ ಹಾಗೂ ಇ ಆಫೀಸ್ ಅರ್ಜಿಗಳ ಪ್ರಗತಿ ಕುರಿತು ಪರಿಶೀಲಿಸಿದರು. ಪ್ರಭಾರ ತಹಸೀಲ್ದಾರ್ ಎ.ಡಿ.ಅಮರವಾದಗಿ ಡಿಸಿ ಅವರಿಗೆ ಮಾಹಿತಿ ನೀಡಿದರು.

ಕಂದಾಯ ದಾಖಲೆಗಳ ಗಣಕೀಕರಣ ಕೊಠಡಿಗೆ ತೆರಳಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಬಗ್ಗೆ ಪರಿಶೀಲನೆ ನಡೆಸಿದರಲ್ಲದೇ ಸಾರ್ವಜನಿಕರಿಗೆ ಬೇಕಾಗುವ ದಾಖಲೆಗಳನ್ನು ಶೀಘ್ರದಲ್ಲಿ ಅನುಕೂಲ ಆಗುವಹಾಗೆ ವ್ಯವಸ್ಥೆ ಮಾಡಬೇಕು ಎಂದು ತಹಸೀಲ್ದಾರ್‌ಗೆ ತಿಳಿಸಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ, ಕೊಠಡಿ, ಊಟದ ಕೋಣೆ, ಅಡುಗೆ ಕೋಣೆ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ವಿದ್ಯಾರ್ಥಿಗಳಿಂದ ಹಾಸ್ಟೆಲ್ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು. ಪುರಸಭೆಗೆ ಭೇಟಿ ನೀಡಿದ್ದ ಡಿಸಿ ಅವರು ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಂದ ಮಾಹಿತಿ ಪಡೆದುಕೊಂಡರು.
ಕಂದಾಯ ನಿರೀಕ್ಷಕ ಡಿ. ಎಸ್. ತಳವಾರ, ವೈದ್ಯರಾದ ಡಾ. ಪರಶುರಾಮ ವಡ್ಡರ, ಡಾ.ಹರಿರಾಮಕೃಷ್ಣ, ಡಾ.ಅಬ್ದುಲ್ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು