College lecturer assault case: Telangana-based accused arrested

ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಮುದ್ದೇಬಿಹಾಳ : ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಮಾಡಿದ್ದ ಆಗಂತುಕನ ಪರಿಚಯ ಲಭ್ಯವಾಗಿದ್ದು, ತೆಲಂಗಾಣದ ರಾಜ್ಯದ ನಲಗೊಂಡ ಜಿಲ್ಲೆಯ ಅನುಮುಲಾ ಮಂಡಲದ ಹಜಾರಿಗುಡದ ನಿವಾಸಿ ಪೇರುಮಾಳ ಸೈದಯ್ಯ ಧನುಂಜಯ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ, ಈತ ಮನೆ ಬಾಡಿಗೆ ಕೇಳುವ ನೆಪದಲ್ಲಿ ಉಪನ್ಯಾಸಕಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಳ್ಳತನ ಮಾಡಲು ಹೋಗಿದ್ದನೆಂದು ಆರೋಪಿ ಬಾಯ್ಬಿಟ್ಟಿರುವುದಾಗಿ ತಿಳಿಸಿದ್ದಾರೆ.

ಒಬ್ಬಂಟಿಯಾಗಿರುವ ಮಹಿಳೆಯರು ತಮ್ಮ ಮಹಡಿಯ ಮನೆಗಳ ಕೊಠಡಿಯಲ್ಲಿ ಪರಿಚಿತರನ್ನೇ ಗುರುತಿಸಿ ಬಾಡಿಗೆ ಕೊಡುವ ಕಾರ್ಯ ಮಾಡಬೇಕು. ಹೆಚ್ಚಿನ ಬಾಡಿಗೆ ಆಸೆಯಿಂದ ಅಪರಿಚಿತರಿಗೆ ಮನೆ ಕೊಡುವುದನ್ನು ಕೈಬಿಡಬೇಕು ಎಂದು ಪಿಎಸ್‌ಐ ತಿಪರೆಡ್ಡಿ ನಾಗರಿಕರಲ್ಲಿ ವಿನಂತಿಸಿದ್ದಾರೆ.

ಹೆಚ್ಚುವರಿ ಎಸ್ಪಿ ಭೇಟಿ: ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಉಪನ್ಯಾಸಕಿಯ ಮನೆಗೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಶನಿವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿಎಸ್‌ಐ ಸಂಜಯ ತಿಪರೆಡ್ಡಿ ಇದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ