ಬಾಗಲಕೋಟೆ: ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದ ಎರಡು ಬೈಕ್ ಗಳ ನಡುವಿನ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಬಾಗಲಕೋಟೆ ಬಿವಿವಿಯ ಶ್ರುತಿ ವಂದಕುದರಿ (32 ವರ್ಷ), ಡೆಂಟಲ್ ಕಾಲೇಜ್ ಉಪನ್ಯಾಸಕಿ ರಜನಿ ವಂದಕುದರಿ (34 ವರ್ಷ), ಸಾಪ್ಟವೇರ್ ಇಂಜಿನಿಯರ್ ಅಭಿಷೇಕ್ ದೋತ್ರಿ (20 ವರ್ಷ) ಮೃತರು ಎಂದು ಗುರುತಿಸಲಾಗಿದೆ.
ಸ್ಕೂಟಿಯಲ್ಲಿದ್ದ ಮಹಿಳೆಯರು ಡಿವೈಡರ್ ಕ್ರಾಸ್ ಮಾಡಿ ಅಡ್ಡ ಬಂದು ವೇಗವಾಗಿ ಹೊರಟಿದ್ದ ಯಮಹಾ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ರಭಸಕ್ಕೆ ಬೈಕ್‌ಗಳು ಪೀಸ್ ಪೀಸ್ ಆಗಿವೆ. ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.