Congress is responsible for Mahadayi's setback: MP Basavaraja Bommai

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು.

ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.


11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ಇನ್ನು, ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು