ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು (Congress protest) ಹಮ್ಮಿಕೊಂಡಿದೆ.
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Congress protest) ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.
ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.
ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!
ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.
ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.
Karnataka politics: ಇಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೋಲ್‌ಸೇಲ್ ದೊಂಬರಾಟ..!
ಬೆಂಗಳೂರು : ಮೂಡಾ ಹಗರಣ (Muda Case)ದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ( Siddaramaiah) ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಕೂಡ ಪ್ರತಿಭಟನೆ ನಡೆಸುವ ರಾಜ್ಯದಲ್ಲಿ ರಾಜಕೀಯ (Karnataka politics)ದಲ್ಲಿ ದೊಂಬರಾಟಕ್ಕೆ ಸಾಕ್ಷಿಯಾಗಲಿದೆ.
ಮೂರು ಪಕ್ಷಗಳ ಪ್ರತಿಭಟನೆಯಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಗಳಿವೆ. ಸಾರ್ವಜನಿಕರು ಎಚ್ಚರಿಕೆ ಇರಬೇಕಾದ ಅನಿವಾರ್ಯತೆ ಉಂಟಾಗಿದೆ.
ಶನಿವಾರ ರಾಜಭವನದಿಂದ ಥಾವರ್ ಚಂದ್ ಗೆಹೋಟ್ ಅವರ ಆದೇಶ ಹೊರಬೀಳುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ತಲ್ಲಣಕ್ಕೆ (Karnataka politics) ಕಾರವಾಗಿತ್ತು. ಸ್ವತಃ ಗೃಹಸಚಿವ ಪರಮೇಶ್ವರ್ ಅವರೇ, ಸರ್ಕಾರ ಅಲುಗಾಡುತ್ತಿರುವುದು ನಿಜ ಎಂದು ಒಪ್ಪಿ ಹೇಳಿಕೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಪರವಾಗಿ ರಾಜ್ಯಾದ್ಯಂತ ಹಲವು ಸಂಘಟನೆಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ದ ತನಿಖೆಗೆ ತಮ್ಮ ಪಾದಯಾತ್ರೆಯೇ ಕಾರಣ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಸಹ ಇಂದು ಗಾಂಧಿ ಪ್ರತಿಮೆಯ ಎದುರು ಸಿಎಂ ರಾಜೀನಾಮೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಲಿದೆ.
ನಗರದ ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.