Congress vs BJP: congress legislative session today.. BJP fight

Congress vs BJP: ಇಂದು ‘ಕೈ’ ಶಾಸಕಾಂಗ ಸಭೆ.. BJP ಹೋರಾಟ

Congress vs BJP: ಇಂದು ‘ಕೈ’ ಶಾಸಕಾಂಗ ಸಭೆ.. BJP ಹೋರಾಟ

Ad
Ad

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸಿಎಂ ಬೆಂಬಲಕ್ಕೆ ಶಾಸಕರು ನಿರ್ಣಯ ಮಂಡಿಸಿ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ಏತನ್ಮಧ್ಯೆ, ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದ್ದನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. (Congress vs BJP)

Ad
Ad

Join Our telegram: https://t.me/dcgkannada

ಮುಡಾ ಕೇಸ್ ನಲ್ಲಿ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ನಿಂತ ಬೆನ್ನಲ್ಲೇ, ಶಾಸಕರೂ ನಿಲ್ಲುವ ಸಾಧ್ಯತೆಯಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆ ಇದೆ.

ಇನ್ನು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಸಾಯಿ ವೆಂಕಟೇಶ್ವರ ಗಣಿ ಕಂಪನಿಗೆ ಅಕ್ರಮ ಜಮೀನು ಮಂಜೂರು, ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಕೈಗಾರಿಕೆ ಇಲಾಖೆಯಲ್ಲಿ ಅಕ್ರಮ ನೇಮಕಾತಿ ಆರೋಪ ಸೇರಿದಂತೆ ಆರು ಮಂದಿಯ ವಿರುದ್ಧ ಅಭಿಯೋಜನೆಗೆ
ಅನುಮತಿ ನೀಡದೆ ರಾಜ್ಯಪಾಲರು ಬಾಕಿ ಉಳಿ ಸಿಕೊಂಡಿದ್ದಾರೆ. ಈ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಬಿಜೆಪಿ-ಜೆಡಿಎಸ್‌ನ ನಾಯಕರ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಅಭಿಯೋ ಜನೆಗೆ ಅನುಮತಿ ನೀಡಿಲ್ಲ, ಆದರೆ, ಮುಖ್ಯಮಂತ್ರಿ ಗಳ ವಿಚಾರದಲ್ಲಿ ಮಾತ್ರ ತದ್ವಿರುದ್ದವಾಗಿ ನಡೆದುಕೊಂಡಿದ್ದಾರೆ ಎಂಬುದು ಆಕ್ರೋಶಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ದಲ್ಲೂ ಇಂತ ಹುದೇ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯುವ ಸಂಭವವಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಕೆಲ ಸಚಿವರ ಒತ್ತಾಯ ಮೇರೆಗೆ ಸಚಿವ ಸಂಪುಟದಲ್ಲಿ ರಾಜ್ಯಪಾಲರ ತಾರತಮ್ಯ ಧೋರಣೆ ಕುರಿತು ಚರ್ಚಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿಗಳ ವಿರುದ್ದ ಅಭಿಯೋಜನೆ ನೀಡಲು ಇದ್ದ ಆತುರತೆ ಬಾಕಿ ಇರುವುದಕ್ಕೆ ಯಾಕೆ ಇಲ್ಲ ಎಂದು ಪ್ರಶ್ನಿಸಲು ಚಿಂತನೆಯಿದೆ ತಿಳಿದು ಬಂದಿದೆ.

ಬಿಜೆಪಿ ರಾಜ್ಯವ್ಯಾಪಿ ಧರಣಿ:


ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಖಂಡಿಸಿ ಹಾಗೂ ರಾಜ್ಯ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. (Congress vs BJP)

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್‌ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗವಹಿಸುವರು ಎಂದು ಮಾಹಿತಿ ನೀಡಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500