ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸಿಎಂ ಬೆಂಬಲಕ್ಕೆ ಶಾಸಕರು ನಿರ್ಣಯ ಮಂಡಿಸಿ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ಏತನ್ಮಧ್ಯೆ, ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದ್ದನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. (Congress vs BJP)
Join Our telegram: https://t.me/dcgkannada
ಮುಡಾ ಕೇಸ್ ನಲ್ಲಿ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ನಿಂತ ಬೆನ್ನಲ್ಲೇ, ಶಾಸಕರೂ ನಿಲ್ಲುವ ಸಾಧ್ಯತೆಯಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆ ಇದೆ.
ಇನ್ನು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಸಾಯಿ ವೆಂಕಟೇಶ್ವರ ಗಣಿ ಕಂಪನಿಗೆ ಅಕ್ರಮ ಜಮೀನು ಮಂಜೂರು, ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಕೈಗಾರಿಕೆ ಇಲಾಖೆಯಲ್ಲಿ ಅಕ್ರಮ ನೇಮಕಾತಿ ಆರೋಪ ಸೇರಿದಂತೆ ಆರು ಮಂದಿಯ ವಿರುದ್ಧ ಅಭಿಯೋಜನೆಗೆ
ಅನುಮತಿ ನೀಡದೆ ರಾಜ್ಯಪಾಲರು ಬಾಕಿ ಉಳಿ ಸಿಕೊಂಡಿದ್ದಾರೆ. ಈ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಿಜೆಪಿ-ಜೆಡಿಎಸ್‌ನ ನಾಯಕರ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಅಭಿಯೋ ಜನೆಗೆ ಅನುಮತಿ ನೀಡಿಲ್ಲ, ಆದರೆ, ಮುಖ್ಯಮಂತ್ರಿ ಗಳ ವಿಚಾರದಲ್ಲಿ ಮಾತ್ರ ತದ್ವಿರುದ್ದವಾಗಿ ನಡೆದುಕೊಂಡಿದ್ದಾರೆ ಎಂಬುದು ಆಕ್ರೋಶಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ದಲ್ಲೂ ಇಂತ ಹುದೇ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯುವ ಸಂಭವವಿದೆ.
ಇದನ್ನೂ ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy
ಕೆಲ ಸಚಿವರ ಒತ್ತಾಯ ಮೇರೆಗೆ ಸಚಿವ ಸಂಪುಟದಲ್ಲಿ ರಾಜ್ಯಪಾಲರ ತಾರತಮ್ಯ ಧೋರಣೆ ಕುರಿತು ಚರ್ಚಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿಗಳ ವಿರುದ್ದ ಅಭಿಯೋಜನೆ ನೀಡಲು ಇದ್ದ ಆತುರತೆ ಬಾಕಿ ಇರುವುದಕ್ಕೆ ಯಾಕೆ ಇಲ್ಲ ಎಂದು ಪ್ರಶ್ನಿಸಲು ಚಿಂತನೆಯಿದೆ ತಿಳಿದು ಬಂದಿದೆ.
ಬಿಜೆಪಿ ರಾಜ್ಯವ್ಯಾಪಿ ಧರಣಿ:
ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಖಂಡಿಸಿ ಹಾಗೂ ರಾಜ್ಯ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. (Congress vs BJP)
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್‌ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗವಹಿಸುವರು ಎಂದು ಮಾಹಿತಿ ನೀಡಿದ್ದಾರೆ.