ಮುದ್ದೇಬಿಹಾಳ : ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ಸಂರಕ್ಷಣೆ,ನಿಯAತ್ರಣ ಕುರಿತು ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ದಾಖಲಿಸಿಕೊಂಡಿದ್ದು ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು,ಬಸ್ ನಿಲ್ದಾಣದ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭೆಗೆ ಮಾಹಿತಿ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು.ನಗರ ಸ್ಥಳೀಯ ಸಂಸ್ಥೆಯಿAದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗು ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.







