Countdown to village deity fair: Muddebihala city beautified like a bride

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಮೇ.30 ರಂದು ದೇವಿ ಪ್ರತಿಷ್ಠಾಪನೆಗೊಳ್ಳಲಿದ್ದು ವಿದ್ಯುಕ್ತವಾದ ಚಾಲನೆ ಸಿಗಲಿದೆ. ಜಾತ್ರೆಯ ಅಂಗವಾಗಿ ಎಲ್ಲ ಸಿದ್ಧತೆಗಳನ್ನು ಜಾತ್ರಾ ಕಮೀಟಿಯ ಪ್ರಮುಖ ಮಾಡಿಕೊಂಡಿದ್ದಾರೆ. ಇಡೀ ಮುದ್ದೇಬಿಹಾಳ ಪಟ್ಟಣದ ತುಂಬೆಲ್ಲಾ ಜನನಿಬಿಡ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಪ್ರಮುಖ ವೃತ್ತಗಳಾದ ಬಸವೇಶ್ವರ, ಇಂದಿರಾ, ಅಂಬೇಡ್ಕರ್, ಬನಶಂಕರಿ ವೃತ್ತಗಳನ್ನು ವೃತ್ತಾಕಾರದಲ್ಲಿ ವಿದ್ಯುತ್ ದೀಪ ಅಳವಡಿಸಿದ್ದು ಜನರ ಮನಸೂರೆಗೊಂಡಿದೆ.

ಶಾರದಾ ದೇವಿ ಹಾಗೂ ದ್ಯಾಮವ್ವ ದೇವಿಯರನ್ನು ಮೆರವಣಿಗೆಯಲ್ಲಿ ಕರೆತರಲು ಹೊಸ ಎತ್ತಿನ ಬಂಡಿಗಳನ್ನು ಸಿದ್ದಪಡಿಸಲಾಗಿದೆ. ಜಾತ್ರೆಗೆ ಬಂದ ಭಕ್ತರಿಗೆ ಹೊಟ್ಟೆ ತುಂಬಿಸಲು ಐದು ದಿನಗಳ ಕಾಲ ಪ್ರಸಾದದ ವ್ಯವಸ್ಥೆ ಬೆಳಗ್ಗೆ 12 ರಿಂದ ರಾತ್ರಿ 10ರವರೆಗೆ ಉಣಬಡಿಸಲು ಕಮೀಟಿ ಸಿದ್ಧತೆ ಮಾಡಿಕೊಂಡಿದೆ. ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದ್ದು ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಭಾವೈಕ್ಯತೆಯನ್ನು ಸಾರುವ ಜಾತ್ರೆ ತನ್ನ ವೈಭವ ಇಮ್ಮಡಿಸಿಕೊಂಡಿದೆ.

ಇದು ನಮ್ಮೂರು ಜಾತ್ರೆಯಾಗಿದ್ದು ಜಾತಿ, ಧರ್ಮ, ಮತ, ಬೇಧವಿಲ್ಲದೇ ಎಲ್ಲರೂ ಒಗ್ಗೂಡಿ ಆಚರಿಸುತ್ತಿದ್ದೇವೆ. ಹಲವು ಕಲಾತಂಡಗಳು ಆಗಮಿಸಿದ್ದು ಮೆರವಣಿಗೆ ನೋಡುವುದೇ ಕಣ್ಣಿಗೆ ಒಂದು ಹಬ್ಬದಂತಿರಲಿದೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ