ಬೆಳಗಾವಿ : ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿಯಾದ ಪರಿಣಾಮ 3 ಕರುಗಳು (Cow death) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಬಳಿ ನಡೆದಿದೆ.
Join Our telegram: https://t.me/dcgkannada
ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್ ನಲ್ಲಿ ಸುಮಾರು 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ, ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ವಾಹನದಿಂದ ಕೆಳಗಿಳಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು (Cow death) ಸಾವನ್ನಪ್ಪಿವೆ.
ಇದನ್ನೂ ಓದಿ: Tungabhadra dam: ಕಟ್ ಆದ ಗೇಟ್ ಚೈನ್ ಅಳವಡಿಸುವಾಗ ಅವಘಡ!
ಸ್ಥಳಕ್ಕೆ ಸಿಪಿ ಐ ಪಂಚಾಕ್ಷರಿ ಸಾಲಿಮಠ, ಪಿ ಎಸ್ಐ ಗುರುರಾಜ ಕಲಬುರ್ಗಿ ಹಾಗೂ ಸಿಬ್ಬಂದಿ ಭೇಟಿ ನೀಡಿ, 9 ಗೋವುಗಳನ್ನು ವಶಕ್ಕೆ ಪಡೆದು ಇಂಚಲದ ಗೋಶಾಲೆಗೆ ಸಾಗಿಸಿ ರಕ್ಷಿಸಿದ್ದಾರೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.