Crime news: Extortion of a businessman at Koluru Cross.. Accused arrested

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಕ್ರಾಸ್‌ನಲ್ಲಿ ಕೊಲ್ಹಾಪುರದ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಹಣ,ಚಿನ್ನಾಭರಣ ದೋಚಿದ್ದ ಆರೋಪಿತರನ್ನು ಶನಿವಾರ ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕೊಲ್ಹಾಪುರದ ಉದ್ಯಮಿ ಅಶೋಕ ಕುಲಕರ್ಣಿ ಎಂಬುವರು ಆ.29 ರಂದು ಮುದ್ದೇಬಿಹಾಳದಿಂದ ತಂಗಡಗಿ ಕಡೆಗೆ ತೆರಳುವಾಗ ಕೋಳೂರು ಕ್ರಾಸ್‌ಬಳಿ ಅವರ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ ಚಾಕು ತೋರಿಸಿ ಕಣ್ಣಿಗೆ ಖಾರದಪುಡಿ ಎರಚಿ ಅವರ ಬಳಿ ಇದ್ದ ಚಿನ್ನದ ಉಂಗುರು, ನಗದು ಹಣ, ಕೊರಳಲ್ಲಿದ್ದ ಚಿನ್ನದ ಸರ ಸೇರಿ ಒಟ್ಟು 61 ಸಾವಿರ ರೂ. ಮೌಲ್ಯದ ಚಿನ್ನಾಭರಣ, ನಗದು ಹಣವನ್ನು ಯಾರೋ ಇಬ್ಬರು ವ್ಯಕ್ತಿಗಳು ಸುಲಿಗೆ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದರ ತನಿಖೆ ನಡೆಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ ಹಾಗೂ ತಂಡದವರು, ತಾಂತ್ರಿಕ ಸಹಾಯದಿಂದ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿತರಾದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ರಾಕೇಶ ಸಾವಂತ, ರೋಹನ ಯೇಡಕರ, ಪ್ರಥಮೇಶ ಹವಾಲ್ದಾರ ಎಂಬುವರನ್ನು ಬಂಧಿಸಿ ಅವರನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯದಲ್ಲಿ ಭಾಗಿಯಾಗಿದ್ದು ತಾವೆ ಎಂದು ಒಪ್ಪಿಕೊಂಡಿದ್ದು ಅವರಿಂದ ಚಿನ್ನಾಭರಣ, ನಗದು ಹಣ, ಒಂದು ಬೈಕ್, ಮೊಬೈಲ್ ಫೋನಗಳು ಸೇರಿ ಒಟ್ಟು 1.70 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಆರೋಪಿತರನ್ನು ಪತ್ತೆ ಹಚ್ಚಲು ಶ್ರಮಿಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ವಿ.ಎನ್.ಹಾಲಗಂಗಾಧರಮಠ, ಸಿ.ಎಸ್.ಬಿರಾದಾರ, ಆರ್.ಎಸ್.ಮಾದರ, ಎಸ್.ಎಲ್.ಹತ್ತರಕಿಹಾಳ ಅವರ ತಂಡಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಬಹುಮಾನ, ಪ್ರಶಂಸನಾ ಪತ್ರ ಘೋಷಣೆ ಮಾಡಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ