
ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ, ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. (Crime news)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವರ್ ಎಂಬ ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದ. ಘಟನೆ ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಪ್ರಕರಣ ನಡೆದಿದೆ.
ನೀಲಾ ಹಂಪಣ್ಣನವರ ಎಂಬ ಮಹಿಳೆಯ ಮೇಲೆ ಸಂಜೆ 4 ಗಂಟೆಯ ಸುಮಾರಿಗೆ ಮಹೇಶ ಚಾಕು ಇರಿದುಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.
ಮಹೇಶನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ