Crime news: The policeman who kept his wife in a shed for 2 months

Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಬೆಳಗಾವಿ: ಪತ್ನಿಯ ಶೀಲ ಶಂಕಿಸಿದ ಪೊಲೀಸ್ ಪೇದೆಯೊಬ್ಬರು ಕಳೆದ ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಹಾಗೂ ಗ್ಯಾಂಗ್‌ ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ ಕೊಂದಿರುವ ಘಟನೆ ದೇಶಾದ್ಯಂತ ಸುದ್ದಿಯಲ್ಲಿರುವಾಗಲೇ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿ ಯಲ್ಲಪ್ಪ ಅಗಸೆ ಪತ್ನಿ ಪ್ರತಿಮಾಳ ಶೀಲ ಶಂಕಿಸಿ ಶೆಡ್‌ನಲ್ಲಿ ಕೂಡಿಟ್ಟು ಹಲ್ಲೆ ಮಾಡಿ ಬರೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.

10 ವರ್ಷಗಳ ಹಿಂದೆ ಯಲ್ಲಪ್ಪ ಹಾಗೂ ಪ್ರತಿಮಾ ಮದುವೆಯಾಗಿದ್ದರು. ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾನೆ. ಇವರಿಗೆ ಮೂವರು ಮಕ್ಕಳಿದ್ದರೂ ಪತ್ನಿಯ ಶೀಲದ ಮೇಲೆ ಶಂಕೆ ಮಾಡಿ ಶೆಡ್ನಲ್ಲಿ ಕೂಡಿ ಹಾಕಿ ಮನಸೋ ಇಚ್ಚೆ ಹಲ್ಲೆ ಮಾಡಿ ಬರೆ ಹಾಕಿದ್ದಾನೆ.

ಈ ಬಗ್ಗೆ ಮಾತನಾಡಿರುವ ಮಹಿಳೆ, ‘ನನ್ನ ತವರು ಮನೆಯವರು ನನ್ನನ್ನು ನೋಡಲು ಬಂದಾಗ ಅವರಿಗೂ ಸಹ ನನ್ನ ಪತಿ ಬೆದರಿಕೆ ಹಾಕಿದ್ದಾರೆ. ನಿಮ್ಮ ಮಗಳು ಬೇರೆಯವನೊಂದಿಗೆ ಓಡಿ ಹೋಗಿದ್ದಾಳೆ ಎಂದು ದೂರು ಕೊಟ್ಟು ನಿಮ್ಮ ಮೇಲೆಯೇ ಕೇಸ್ ದಾಖಲಿಸುತ್ತೇನೆ ಎಂದು ಬೇದರಿಕೆ ಹಾಕಿದ್ದಾನೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಶೆಡ್‌ನಲ್ಲಿ ಯಾರೂ ಇಲ್ಲದ ವೇಳೆ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಳೆ ಬೆಳಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರನ್ನು ಭೇಟಿಯಾಗಿ ನನ್ನ ಪತಿಯ ಮೇಲೆ ದೂರು ಕೊಡುವುದಾಗಿ ಪ್ರತಿಮಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು