Crime news: Child killed in husband-wife fight..!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. (Crime news)

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

Join Our Telegram: https://t.me/dcgkannada

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ. (Crime news)

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ