ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.
Join Our Telegram: https://t.me/dcgkannada
ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.
ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Murder Case: ವಿಚ್ಛೇದನ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!
ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.