ಆಸ್ತಿಗಾಗಿ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ!

ಆಸ್ತಿಗಾಗಿ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ!

ವಿಜಯಪುರ: ಆಸ್ತಿ ವಿಚಾರಕ್ಕೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದು, ವೃದ್ಧನ ಮೇಲೆ ಕುಳಿತು ಮನಬಂದಂತೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಜಿಲ್ಲೆಯ ನಾಲತವಾಡ- ನಾರಾಯಣಪುರ ಬಳಿಯ ವೀರೇಶನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ದೇವಮ್ಮ ಲೊಟಗೇರಿ ಹಾಗೂ ಸಣ್ಣಹನುಮಂತ ಲೊಟಗೇರಿ ಎಂಬುವವರ ಮೇಲೆ ಅಮಾನವೀಯ ರೀತಿಯಲ್ಲಿ ಸಂಬಂಧಿಗಳೇ ಹಲ್ಲೆ ಮಾಡಿದ್ದಾರೆ.

ಮಹಿಳೆ ಹಾಗೂ ವೃದ್ದನ ಸಂಬಂಧಿಕರಾದ ಅಮರಪ್ಪ ಕೋರಿ, ಈರಪ್ಪ ಕೋರಿ ಎಂಬುವವರೇ ಹಲ್ಲೆ ಮಾಡಿದ್ದಾರೆ. ದೇವಮ್ಮ ಅವರ ತಲೆಗೂದಲು ಹಿಡಿದು ಕಾಲಿನಿಂದ ತುಳಿದು ಹಲ್ಲೆ ನಡೆಸಿದರೆ, ಸಣ್ಣಹನುಮಂತನ ಎದೆ ಮೇಲೆ ಕುಳಿತು ಹೊಡೆದು ಹಲ್ಲೆ ಮಾಡಲಾಗಿದೆ.

ತೀವ್ರವಾಗಿ ಹಲ್ಲೆಗೊಳಗಾದ ದೇವಮ್ಮ ಹಾಗೂ ಸಣ್ಣಹನುಮಂತ ಬಾಗಲಕೋಟೆಯ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸಣ್ಣಹನುಮಂತ ಹಾಗೂ ಕೋರಿ ಕುಟುಂಬಗಳ ಮಧ್ಯೆ ಆಸ್ತಿ ವಿಷಯವಾಗಿ ವಿವಾದವಿದ್ದು, ಇದೇ ವಿಷಯವಾಗಿ ಉಂಟಾದ ಜಗಳದಲ್ಲಿ ಕೋರಿ ಕುಟುಂಬದವರು ಲೊಟಗೇರಿ ಕುಟುಂಬದ ವೃದ್ಧರ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

Latest News

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಮಾನವೀಯ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಮಾ.9 ರಂದು ಸಾಯಂಕಾಲ 5ಗಂಟೆಗೆ ಪಟ್ಟಣದ ಮಹಾಂತೇಶ ನಗರದ ಗಣೇಶ ಗುಡಿ ಹತ್ತಿರದಲ್ಲಿರುವ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಶಾಲೆಯ ಗೌರವಾಧ್ಯಕ್ಷ ವೇ.ಸಂಗಯ್ಯ ಹಾಲಗಂಗಾಧರಮಠ ವಹಿಸುವರು.ವೈದ್ಯರಾದ ಡಾ.ಚಂದ್ರಶೇಖರ ಶಿವಯೋಗಿಮಠ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಹುಲ್ಲೂರ ಎಸ್.ಎನ್.ಡಿ ನ್ಯಾಶನಲ್