ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ ಕೊಡಬೇಕೆಂದು ಉಭಯ ಪಕ್ಷಗಳು ಟೀಕೆ ಮಾಡುತ್ತಿವೆ.

ಈ ಬಗ್ಗೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆ ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಬಿಜೆಪಿಯೇ ನಂ1. ಗೋಲ್ಡು, ಸಿಲ್ವ‌ರ್, ಕಂಚು ಎಲ್ಲವೂ ಬಿಜೆಪಿ ಪಾಲು! ಎಂದು ಬರೆದಿದ್ದು, ಅದರೊಂದಿಗೆ ಫೋಟೋವನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಚಿನ್ನ, ವಿಪಕ್ಷ ನಾಯಕ ಆ‌ರ್ ಅಶೋಕ್ ಗೆ ಬೆಳ್ಳಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಂಚಿನ ಪದಕ ಧರಿಸಿರುವ ರೀತಿ ಎಡಿಟ್ ಮಾಡಿ, ಇವರು ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕ ಪಡೆದವರು ಎಂದು ಬರೆದು ಟೀಕಿಸಿದೆ.

ಇತ್ತ, ಬಿಜೆಪಿಯೂ ಕಾಂಗ್ರೆಸ್‌ಗೆ ತಿರುಗೇಟು ನೀಡಿ ಮತ್ತೊಂದು ಫೋಟೋವನ್ನು ಹಂಚಿಕೊಂಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನ, ಮಾಜಿ ಸಚಿವ ನಾಗೇಂದ್ರ ಬೆಳ್ಳಿ ಹಾಗೂ ಬಸವನಗೌಡ ದದ್ದಲ್ ಕಂಚಿನ ಪದಕ ಧರಿಸಿರುವ ರೀತಿ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಸ್ಕ್ಯಾಮ್ 2024, ₹500 ಕೋಟಿ ಎಂದು ಬರೆದು ಬಿಜೆಪಿ ಟೀಕಿಸಿದೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು