ನವದೆಹಲಿ : ವಾಣಿಜ್ಯ ಬಳಕೆ ಅಡುಗೆ ಅನಿಲ ದರ ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಧಿಡೀರ್ ಏರಿಕೆಯಾಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್, ರೆಸ್ಟೋರೆಂಟ್ ಮೊದಲಾದ ಕಡೆ ಹೆಚ್ಚಾಗಿ ಬಳಸುವ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.
ಈ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ತಿಂಗಳೂ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಿದಂತಾಗಿದೆ. ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 39 ರೂಪಾಯಿ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39 ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಸಿಲಿಂಡರ್‌ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.
ಈ ಹಿಂದೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೇಳೆಯನ್ನು ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂಪಾಯಿ ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂಪಾಯಿ ಹೆಚ್ಚಳ ಮಾಡಲಾಗಿತ್ತು.
ಇದನ್ನೂ ಓದಿ: Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಇದೀಗ ಸತತ ನಾಲ್ಕನೇ ತಿಂಗಳು ಕೂಡ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ರೆಸ್ಟೋರೆಂಟ್, ಹೋಟೆಲ್, ಸಣ್ಣ ಕೈಗಾರಿಕೆ, ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.