ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಮನೆಯಿಂದ ಊಟ ಪಡೆಯಲು ಹರಸಾಹಸ ಪಡುತ್ತಿದ್ದಾರೆ.
ಹೌದು, ಮನೆ ಊಟಕ್ಕಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.
Join Our Telegram: https://t.me/dcgkannada
ಮನೆಯಿಂದ ಊಟ, ಹಾಸಿಗೆ ಮತ್ತು ಪುಸ್ತಕ ಪಡೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಅಧೀಕ್ಷಕರಿಗೆ ನಿರ್ದೇಶಿಸುವಂತೆ ನಟ ದರ್ಶನ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಸರ್ಕಾರದ ಪರ ಅಭಿ ಯೋಜಕ ಬಿ.ಎ. ಬೆಳ್ಳಿಯಪ್ಪ, ಮನೆಯಿಂದ ಊಟ, ಹಾಸಿಗೆ ಹಾಗೂ ಪುಸ್ತಕಗಳನ್ನು ತರಿಸಿಕೊಳ್ಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 2024ರ ಆ.14ರಂದು ರಾಜ್ಯ ಸರ್ಕಾರ ತಿರಸ್ಕರಿಸಿ ಅಂದೇ ಆ ಆದೇಶದ ಬಗ್ಗೆ ದರ್ಶನ್ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಲಾಯಿತು.
ದರ್ಶನ್ (Darshana) ಪರ ವಕೀಲರಾದ ಸಂಜೀವಿನಿ, ಸರ್ಕಾರದ ಆದೇಶದ ಪ್ರತಿ ಈವರೆಗೂ ನಮಗೆ ತಲುಪಿಲ್ಲ. ಆದೇಶ ಪರಿಶೀಲಿಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂಬ ಮನವಿಗೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.
ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!