ಮುದ್ದೇಬಿಹಾಳ : ಬ.ಬಾಗೇವಾಡಿಯಲ್ಲಿ ಐಸೋಲೇಟರ್ ನಿರ್ವಹಣೆ ಇದ್ದ ಪ್ರಯುಕ್ತ ಸೆ.25 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಹಲವೆಡೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.
ಮುದ್ದೇಬಿಹಾಳ, ಕೋಳೂರು, ಹಿರೇಮುರಾಳ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಿಸಲಾಗುತ್ತಿದ್ದು ಸದರಿ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.