TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)


ಕೊಪ್ಪಳ: ತುಂಗಭದ್ರಾ ಜಲಾಶಯ (TB Dam) ಕ್ರಸ್ಟ್ ಗೇಟ್ ಕಿತ್ತು ಹೋದ ಹಿನ್ನಲೆ ಜಲಾಶಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK SHIVAKUMAR) ನೀಡಿ ಪರಿಶೀಲಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಮೇಲೆ ನಿಂತು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಿನ್ನೆ ರಾತ್ರಿ ಜಲಾಶಯದ (TB Dam) 10 ಗೇಟ್ ಓಪನ್ ಇದ್ದವು. ಏಕಾಏಕಿ ಜಲಾಶಯದ 19 ನೇ ಗೇಟ್ ಡ್ಯಾಮೇಜ್ ಹಿನ್ನೆಲೆ ಎಲ್ಲಾ ಗೇಟ್ ಓಪನ್ ಮಾಡಿ ಪ್ರೆಶರ್ ಕಡಿಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು‌.

Join our Telegram: https://t.me/dcgkannada

ರಿಪೇರಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಅವರಿಗೆ ಈಗಾಗಲೇ ಡಿಸೈನ್ ನೀಡಲಾಗಿದೆ. ಇನ್ನು, ಕೂಡಲೇ ಕೆಲಸ ಮಾಡಲು ತಯಾರು ಮಾಡಲಾಗಿದೆ ಎಂದು ತಿಳಿಸಿದರು‌.

ಸದ್ಯ, ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೋರ ಹೋಗುತ್ತಿದೆ ಎಂದರು.

ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ. ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಹೀಗಾಗಿ, ‌ನೀರು ಹೊರಗಡೆ ಬಿಡಲಾಗ್ತಿದೆ. ಆ.13 ರಂದು ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಈಗ ಅದನ್ನು ಮುಂದೂಡಲಾಗಿದೆ ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಇದು (TB Dam) 60 ರಿಂದ 70 ವರ್ಷ ಹಳೆಯ ಜಲಾಶಯ. ಘಟನೆಗೆ ಸಂಬಂಧಿಸಿದಂತೆ
ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ ಡಿಸಿಎಂ ಡಿಕೆಶಿ ಹೇಳಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು