ಇಳಕಲ್: ನಗರದ ಹೊರ ವಲಯದ ಜಮೀನಿನಲ್ಲಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ (Death News) ಘಟನೆ ಸಂಭವಿಸಿದೆ.
Join Out Telegram: https://t.me/dcgkannada
ಮೃತ ವ್ಯಕ್ತಿಯನ್ನು ನಗರದ
ಹಾದಿ ಬಸವನಗರದ ನಾಗೇಶ ಹನಮಂತಪ್ಪ ಬರಡ್ಡಿ ಎಂದು ಗುರುತಿಸಲಾಗಿದೆ.
ಮಳೆಯಾಗಿದ್ದರಿಂದ ಹೊಲದಲ್ಲಿ ಕೆಸರಾಗಿತ್ತು. ವ್ಯಕ್ತಿ ತನ್ನ ಚಪಲ್ಲಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವಾಗ ತುಂಡಾಗಿ ಬಿದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ (Death News) ಎನ್ನಲಾಗಿದೆ.
ಇದನ್ನೂ ಓದಿ: Student suicide case: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ!
ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Muda case : ಸಿಎಂ ಸಿದ್ದರಾಮಯ್ಯ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..
ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.
ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.