
ಶಿವಮೊಗ್ಗ: ಜಿಲ್ಲೆಯ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಕೆ.ಎಚ್ ಶ್ರೀನಿವಾಸ್ ನಿಧನರಾಗಿದ್ದಾರೆ. (Death news)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೇರಿ: https://t.me/dcgkannada
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ರಾಜಕೀಯ ಮಾಡಿದ್ದರು.
ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್ ಸಾಂಸ್ಕೃತಿಕ ವಲಯದಲ್ಲೂ ಹೆಸರು ಮಾಡಿದ್ದರು. ವಕೀಲರಾಗಿ, ಕೃಷಿಕರೂ ಗಮನ ಸೆಳೆದಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.
ಶ್ರೀನಿವಾಸ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಕೆ ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. (Death news)
ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ
ಇಲ್ಲಿನ ಜೋಗ ರಸ್ತೆಯಲ್ಲಿರುವ ಎಲ್ ಬಿ ಕಾಲೇಜು ಇದರ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕಾಲೇಜಿನ ಬೆಳವಣಿಗೆಗಳಲ್ಲಿ ಇವರ ಕೊಡುಗೆ ಅಪಾರವಾಗಿತ್ತು.