ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆ ಹಾಗೂ ಅಧಿಕಾರಿಗಳ ಉದಾಸೀನ ಮನೋಭಾವದಿಂದಾಗಿ ರೈತರು ತೊಂದರೆಯಲ್ಲಿ ಇದ್ದಾರೆ.ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಅನುಷ್ಠಾನಗೊಳಿಸಿರುವ ಯೋಜನೆ ಕೆಲವು ಕಾರಣಗಳಿಂದ ಸ್ಥಗಿತಗೊಂಡಿರುವುದನ್ನು ಬಗೆ ಹರಿಸಲಾಗದೇ ಇರುವುದು ಬೇಸರದ ಸಂಗತಿ ಎಂದು ಹೇಳಿದರು.

ಯೋಜನೆಯ ವ್ಯಾಪ್ತಿಯಲ್ಲಿ ಬರುವ ರೈತರನ್ನು ಒಗ್ಗೂಡಿಸಿಕೊಂಡು ನಾಗರಬೆಟ್ಟದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು.ಅಧಿಕಾರಿಗಳು ನೆಪಗಳನ್ನು ಹೇಳದೇ ಕೆಲಸ ಶುರು ಮಾಡಬೇಕು.ರೈತರಪರವಾಗಿ ನಮ್ಮ ದ್ವನಿ ಸದಾ ಮೊಳಗಲಿದೆ ಎಂದು ಹೇಳಿದರು.

ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ.ಗಂಭೀರವಲ್ಲದ ಸಮಸ್ಯೆಯನ್ನು ದೊಡ್ಡದನ್ನಾಗಿ ಬಿಂಬಿಸಿ ಸಾವಿರಾರು ಎಕರೆ ನೀರಾವರಿ ಆಗುವುದರಿಂದ ವಂಚನೆ ಮಾಡಲಾಗುತ್ತಿದೆ.ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಒದಗಿಸುವುದು,ನ್ಯಾಯುತವಾಗಿ ರೈತರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರೆಯಲಿದೆ.ಜೂನ್ ಮೊದಲ ವಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯ ಅಧ್ಯಕ್ಷ ಚೂನಪ್ಪ ಪೂಜಾರಿ, ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಅವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಮನಪ್ಪ ರಕ್ಕಸಗಿ,ಶರಣಗೌಡ ಸಿದರೆಡ್ಡಿ,ಮಹೇಂದ್ರ ಬಂಗಾರಗುAಡ,ಶAಕರಗೌಡ ಸಿದರೆಡ್ಡಿ,ಹಣಮಂತ್ರಾಯಗೌಡ ಧನ್ನೂರ,ಈರಪ್ಪ ರಕ್ಕಸಗಿ,ಭೀಮನಗೌಡ ಸಿದರೆಡ್ಡಿ,ಮಹಾಂತಯ್ಯ ಹಿರೇಮಠ,
ಶೇಖರ ಸಿದರೆಡ್ಡಿ,ಶಿವಪ್ಪ ಛಲವಾದಿ ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ