Decision to teach ethical science: Schools to start from May 29-Minister Bangarappa

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ ವೇಳೆ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಶಾಲೆಗಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು ಆ ಬಗ್ಗೆ ಮೇಲ್ಮನೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದರು.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಫಲಿತಾಂಶ ಬಂದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಕ್ರಮ : ಶೂನ್ಯ ಫಲಿತಾಂಶ ಬಾರದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದಾಗ ಕೆಲವೊಂದು ಶಾಲೆಗಳು ಶೂನ್ಯ ಬರುತ್ತಿರುತ್ತವೆ. ಅವುಗಳು ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ. ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.

ಡಿಡಿಪಿಐ, ಬಿಇಒಗಳ ಕೊರತೆ: ರಾಜ್ಯದಲ್ಲಿ ಡಿಡಿಪಿಐ, ಬಿಇಒಗಳ ಕೊರತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರು ವಿಜಯಪುರ ಜಿಲ್ಲೆಗೆ ಕಾಯಂ ಡಿಡಿಪಿಐ ನೇಮಕ ಯಾವಾಗ ಮಾಡುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪದೋನ್ನತಿ ನೀಡಿ ನೇಮಕ ಮಾಡಬೇಕಾಗಿದೆ. ಸ್ಥಾನಗಳ ಸಂಖ್ಯೆಯಲ್ಲಿ ಏರುಪೇರಾಗಬಹುದು. ಉಸ್ತುವಾರಿ ಸಚಿವರ ಶಿಫಾರಸ್ಸು ಪಡೆದುಕೊಂಡು ನೇಮಕ ಮಾಡಲಾಗುತ್ತದೆ. ಕಲಿಕಾ ಬಂಧು, ಸೇತುಬಂಧ ಸಂದರ್ಭದಲ್ಲಿ ಡಿಡಿಪಿಐ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದರು. ಶಾಸಕ ಸಿ.ಎಸ್.ನಾಡಗೌಡ ಉಪಸ್ಥಿತರಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ