ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ.

​​        ಈಚೇಗೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ​ ಬಿಎಲ್ ಡಿಇ  ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

          ಇವರು ವಿಜಯಪುರದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅನಾಟಮಿ ಮತ್ತು ಅಲೈಡ್ ಹೆಲ್ತ್ ಸೈನ್ಸ್ (ಹ್ಯೂಮನ್ ಜೆನೆಟಿಕ್ಸ್) ವಿಭಾಗದಲ್ಲಿ “ಜೆನೆಟಿಕ್ ಪಾಲಿಮಾರ್ಫಿಸಂ ಆಫ್ LXR-ಆಲ್ಫಾ ಅಂಡ್ ABCA1 ಜೀನ್ಸ್ ಇನ್ ನಾರ್ತ್ ಕರ್ನಾಟಕ ಪಾಪ್ಯುಲೇಶನ್” (Genetic Polymorphism of LXR-alpha and ABCA1 Genes in North Karnataka Population) ಎಂಬ ವಿಷಯದ ಮೇಲೆ ಸುದೀರ್ಘ ಸಂಶೋಧನೆ ನಡೆಸಿದ್ದರು.

        ಇವರು ಅನಾಟಮಿ ವಿಭಾಗದ ಮುಖ್ಯಸ್ಥರಾದ ಡಾ. ಆರ್. ಎಸ್. ಬುಳಗೌಡ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನಾ ಪ್ರಬಂಧವನ್ನು ಪೂರ್ಣಗೊಳಿಸಿದ್ದಾರೆ.​ವಿಜಯಪುರದಲ್ಲಿ ಕಳೆದ ತಿಂಗಳು ನಡೆದ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಕುಲಾಧಿಪತಿಗಳಾದ  ಬಿ. ಎಂ. ಪಾಟೀಲ ಅವರು ದೀಪಾ ಅವರಿಗೆ ಅಧಿಕೃತವಾಗಿ ಪಿಎಚ್.ಡಿ. ಪದವಿ ಪ್ರದಾನ ಮಾಡಿದರು.

​         ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ, ನವದೆಹಲಿಯ ನ್ಯಾಷನಲ್ ಮೆಡಿಕಲ್ ಕೌನ್ಸಿಲ್‌ನ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷರಾದ ಪ್ರೊ. ಡಾ. ಎಂ. ಕೆ. ರಮೇಶ್, ಉಪ-ಕುಲಾಧಿಪತಿ ಪ್ರೊ. ಡಾ. ವೈ. ಎಂ. ಜಯರಾಜ್, ಕುಲಪತಿ (ಪ್ರಭಾರ) ಪ್ರೊ. ಡಾ. ಅರುಣ್ ಇನಾಮದಾರ, ಕುಲಸಚಿವ ಪ್ರೊ. ಡಾ. ಆರ್. ವಿ. ಕುಲಕರ್ಣಿ, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಡಾ. ಎಸ್. ಎಸ್. ದೇವರಮನಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

—-

ದೀಪಾ ಸಿನ್ನೂರ ಮುದ್ದೇಬಿಹಾಳ ತಾಲ್ಲೂಕು ಯರಝರಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರೇಮಾಬಾಯಿ ಚವ್ಹಾಣ ಅವರ ಸೊಸೆ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸಂತೋಷ ಚವ್ಹಾಣ ಅವರ ಪತ್ನಿ.

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ