ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಆಸ್ಪತ್ರೆಯು ಸೇರಿದಂತೆ ತಾಲ್ಲೂಕಿನಲ್ಲಿಯ ಸರ್ಕಾರಿ ಆಸ್ಪತ್ರೆಗಳ ಆವರಣ,ಒಳ ಹೊರಗಡೆ ಶುಚಿತ್ವಕ್ಕೆ ಅಲ್ಲಿಯ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ, ಆರೋಗ್ಯ ರಕ್ಷಾ ಸಮಿತಿ,ಅರಣ್ಯ ಇಲಾಖೆ ಹಾಗೂ ಪುರಸಭೆ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಡವರು,ಮಧ್ಯಮವರ್ಗದವರಿಗೆ ಕೈಗೆಟುಕುವ ಆರೋಗ್ಯ ಸೇವೆ ದೊರೆಯುವುದು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ.ಸಾಧ್ಯವಾದಷ್ಟು ಸಂಬoಧಪಟ್ಟ ಇಲಾಖೆ,ಅಧಿಕಾರಿಗಳು ಶುಚಿತ್ವಕ್ಕೆ ಆದ್ಯತೆ ನೀಡಲು ವಿನಂತಿಸುತ್ತೇವೆ.ನಾವೂ ಕೈ ಜೋಡಿಸುತ್ತೇವೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ಶುಚಿತ್ವಕ್ಕೆ ಆದ್ಯತೆ ನೀಡಲಾಗಿದೆ.ಪುರಸಭೆಯಿಂದ ನಿತ್ಯವೂ ನಗರದ ಶುಚಿತ್ವಕ್ಕೆ ನಮ್ಮ ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ ಎಂದರು.

ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಡಾ.ವಿಜಯಕುಮಾರ ಗೂಳಿ ಮಾತನಾಡಿ, ಆಸ್ಪತ್ರೆಯ ಶುಚಿತ್ವಕ್ಕೆ ಆದ್ಯತೆ ಕೊಡುವುದಕ್ಕಾಗಿ ಪರಿಸರ ಪರ ಸಂಘಟನೆಯವರು,ಅರಣ್ಯ ಇಲಾಖೆಯವರು,ಪುರಸಭೆಯವರು, ಆರೋಗ್ಯ ರಕ್ಷಾ ಸಮಿತಿಯ ಪದಾಧಿಕಾರಿಗಳು ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದರು.

ಪ್ರಮುಖರಾದ ಸುನೀಲ ಮನಗೂಳಿ ಮಾತನಾಡಿ, ಬಡವರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕಾನಿಂಗ್ ಯಂತ್ರದ ಸೇವೆ ಒದಗಿಸಬೇಕು ಎಂದರು.

ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಬಸವರಾಜ ಬಿಜ್ಜೂರ, ವೈದ್ಯ ಡಾ.ಅಸ್ಪಾಕ್, ಆರೋಗ್ಯ ನಿರೀಕ್ಷಕ ಎಂ.ಎಸ್.ಗೌಡರ,ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ, ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿರ್ದೇಶಕ ಆನಂದಗೌಡ ಬಿರಾದಾರ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷ ರವಿ ಗೂಳಿ,ನಿವೃತ್ತ ಶಿಕ್ಷಕ ಬಿ.ಎಚ್.ಬಳಬಟ್ಟಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಫೀಕ ಶಿರೋಳ ಮೊದಲಾದವರು ಮಾತನಾಡಿದರು.

ಹಡಲಗೇರಿ ರಸ್ತೆಯಲ್ಲಿರುವ ಆಸ್ಪತ್ರೆಯ ಆವರಣವನ್ನು ಪುರಸಭೆ ಸಹಕಾರದೊಂದಿಗೆ ಅರಣ್ಯ ಇಲಾಖೆ, ಹಸಿರು ತೋರಣ ಗೆಳೆಯರ ಬಳಗ,ಆರೋಗ್ಯ ರಕ್ಷಾ ಸಮಿತಿ ಪದಾಧಿಕಾರಿಗಳು ಶುಚಿತ್ವಕ್ಕಾಗಿ ಶ್ರಮದಾನ ಮಾಡಿದರು.

ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸದು ಮಠ, ಅಂಬರೀಶ ಬಿರಾದಾರ,ವಕೀಲ ಎಸ್.ಎಂ.ಪಾಟೀಲ,ಪುರಸಭೆ ಆರೋಗ್ಯ ನಿರೀಕ್ಷಕರಾದ ಜಾವೇದ ನಾಯ್ಕೋಡಿ,ಮಹಾಂತೇಶ ಕಟ್ಟಿಮನಿ, ಆರೋಗ್ಯ ಇಲಾಖೆಯ ವಿಠ್ಠಲ ಕಿಲಾರಟ್ಟಿ, ಸಂತೋಷ ಅಂಗಡಗೇರಿ, ಮಹ್ಮದರಫೀಕ ಬಾಗವಾನ, ಸದಾಶಿವ ಮಾಗಿ,ಹಸಿರು ತೋರಣ ಗೆಳೆಯರ ಬಳಗದ ಸದಸ್ಯರಾದ ಬಿ.ಎಸ್.ಮೇಟಿ,ಶ್ರೀಶೈಲ ಮರೋಳ,ಸೋಮಶೇಖರ ಚೀರಲದಿನ್ನಿ,ನಾಗಭೂಷಣ ನಾವದಗಿ,ಅಮರನಾಥ ಕಡಕೋಳ,ಕಿರಣ ಪಾಟೀಲ,ಅಶೋಕ ರೇವಡಿ,ಸುರೇಶ ಕಲಾಲ, ಡಾ.ಚಂದ್ರಶೇಖರ ಶಿವಯೋಗಿಮಠ,ಅರಣ್ಯಾಧಿಕಾರಿ ಗಿರೀಶ ಆಲಕುಡೆ,ರಾಜಶೇಖರ ಕಲ್ಯಾಣಮಠ,ಸಂತೋಷ ನಾಯಕ,ವಿ.ವಿ.ಪವಾಡಶೆಟ್ಟಿ ಮೊದಲಾದವರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ