ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡಲು ಆಗ್ರಹಿಸಿ ನಡೆಸಿದ್ದ ಹೋರಾಟ ಈಚೇಗೆ ಸಚಿವ ಎಂ.ಬಿ.ಪಾಟೀಲರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಂಧಿಸಿದ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಾನವ ಬಂಧುತ್ವ ವೇದಿಕೆ ತಾಲ್ಲೂಕು ಸಂಚಾಲಕ ಎಸ್.ಎಂ.ನೆರಬೆoಚಿ ಆಗ್ರಹಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ತಿಂಗಳಿAದ ಪಿಪಿಪಿ ಮಾದರಿ ಕಾಲೇಜು ಬೇಡ,ಸರಕಾರಿ ಸ್ವಾಮ್ಯದ ಕಾಲೇಜು ಸ್ಥಾಪನೆ ಮಾಡುವಂತೆ ಆಗ್ರಹಿಸಿ ಹೋರಾಟ ನಡೆಸಲಾಗಿತ್ತು.ಆದರೆ ಸತ್ಯಾಗ್ರಹ ನಡೆಸುವ ವೇಳೆ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ 6 ಜನ ಹೋರಾಟಗಾರ ಬಂಧಿಸಿ ಜೈಲಿನಲ್ಲಿ ಇರಿಸಿದ್ದನ್ನು ಖಂಡಿಸುತ್ತೇವೆ ಎಂದರು.
ಹೋರಾಟಗಾರರನ್ನು ಬೇಷರತ್ತಾಗಿ ಈ ಕೂಡಲೇ ಬಿಡುಗಡೆಗೊಳಿಸಲು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಬಸನಗೌಡ ಪಾಟೀಲ ಇದ್ದರು.







