ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ ಟನ್ ಕಬ್ಬಿಗೆ 5500 ರೂ. ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸೆ.29 ರಂದು ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ತಮ್ಮ ಸಂಘದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.2019ರಲ್ಲಿ ಸಕ್ಕರೆಯ ಎಂ.ಎಸ್.ಪಿ ದರ 31 ರೂ.ಗೆ ಹೆಚ್ಚಿಸಲಾಗಿತ್ತು.ಈಗ ಅದಾಗಿ ಏಳು ವರ್ಷಗಳಾಗಿದ್ದು ಅದನ್ನು 60 ರೂ.ಗಳಿಗೆ ಹೆಚ್ಚಿಸಬೇಕು ಎಂದು ಸಂಘದಿoದ ಬೇಡಿಕೆ ಇರಿಸಲಾಗಿದೆ ಎಂದು ತಿಳಿಸಿದರು.ಎಫ್.ಆರ್.ಪಿ ದರದಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ.ರೈತರಿಗೆ ವ್ಯವಸ್ಥಿತವಾಗಿ ಮೋಸ ಮಾಡುತ್ತಿವೆ.ಸಕ್ಕರೆ ಕಾರ್ಖಾನೆಗಳು ಬಹುತೇಕ ಶೇ.98ರಷ್ಟು ರಾಜಕಾರಣಿಗಳ ಮಾಲೀಕತ್ವದಲ್ಲಿವೆ.ಮತ್ತೆ ರಾಜ್ಯದಲ್ಲಿ 40 ಕಾರ್ಖಾನೆಗಳನ್ನು ಆರಂಭಿಸಲು ಅರ್ಜಿ ಹಾಕಿದ್ದಾರೆ.ಬಾಲಾಜಿ ಸಕ್ಕರೆ ಕಾರ್ಖಾನೆಯವರು ಹಗರಗುಂಡದಲ್ಲಿ ಕಾರ್ಖಾನೆ ಮಾಡಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ರೈತರ ಕಬ್ಬಿನ ಹಣವನ್ನು ಸಕ್ಕರೆ ಕಾರ್ಖಾನೆಯಿಂದ ನೇರವಾಗಿ ರೈತರ ಖಾತೆಗಳಿಗೆ ಹಾಕುವ ಕಾರ್ಯ ಆಗಬೇಕು.ಮಧ್ಯವರ್ತಿ ಕೋ ಆಪರೇಟಿವ್ ಸೊಸೈಟಿಯಿಂದ ಅಥವಾ ಇತರೆ ಅಕೌಂಟಗಳ ಮೂಲಕ ಮಾಡುವುದನ್ನು ತಪ್ಪಿಸಬೇಕು.ಬಾಲಾಜಿ ಸಕ್ಕರೆ ಕಾರ್ಖಾನೆಯಿಂದ ಸುಂದರಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮೂಲಕ ರೈತರಿಗೆ ಹಣ ಹಾಕುವ ಕೆಲಸ ಮಾಡಲಾಗುತ್ತಿದ್ದು ಇದು ಕರ್ನಾಟಕ ಬ್ಯಾಂಕಿoಗ್ ಕಾಯ್ದೆ 9(1ಬಿ) ವಿರುದ್ದವಾಗಿದೆ.ನೇರವಾಗಿಯೇ ಬ್ಯಾಂಕ್‌ನ ಅಕೌಂಟಗೆ ಹಣ ಹಾಕಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ದೇವರಾಜ ಗುಂಡಕನಾಳ ಇದ್ದರು.

25 ಲಕ್ಷ ರೂ.ವೆಚ್ಚದಲ್ಲಿ ವ್ಹೇ ಬ್ರಿಜ್: ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಬಳಿ ಬೈಲಕೂರ ಗ್ರಾಮದ ಮುಖಂಡ ಜಗದೀಶ ಪಂಪಣ್ಣವರ ಅವರು ತಮ್ಮ ಜಮೀನಿನಲ್ಲಿ ವ್ಹೇ ಬ್ರಿಜ್ ಹಾಕಲು ಜಾಗೆ ನೀಡಿದ್ದು 25 ಲಕ್ಷ ರೂ.ಸ್ವಂತ ಹಣ ಖರ್ಚು ಮಾಡಿ ಕಬ್ಬಿನ ಗಾಡಿಗಳನ್ನು ತೂಕ ಮಾಡಿಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ.ನಾಯನೇಗಲಿ ಶುಗರ‍್ಸ್ ಬಳಿಯೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದಲೇ ತೂಕದ ಯಂತ್ರ ಸ್ಥಾಪಿಸಲಾಗುವುದು ಎಂದು ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು.ತೂಕ ಮಾಡಿಕೊಳ್ಳುವ ಟ್ರಾಕ್ಟರ್‌ಗಳಿಗೆ ಕನಿಷ್ಠ ದರ ನಿಗದಿ ಮಾಡುತ್ತಿದ್ದು ಅಲ್ಲಿಂದ ಬಂದ ಆದಾಯವನ್ನು ವ್ಹೇ ಬ್ರಿಜ್‌ನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

Latest News

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ:   ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ: ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಯೊoದು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಇತಿಹಾಸ ನಿರ್ಮಿಸಿದೆ.

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಮುದ್ದೇಬಿಹಾಳ : ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರಂತೆ ಕಾರ್ಯನಿರ್ವಹಿಸುತ್ತಿದ್ದು ಅವರ ಸೇವೆ ಅನನ್ಯವಾದದ್ದು ಎಂದು

ಸೀರತ್ ಅಭಿಯಾನ :                                                           ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಸೀರತ್ ಅಭಿಯಾನ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಮುದ್ದೇಬಿಹಾಳ : ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ : ಪ್ರಸಕ್ತ ವರ್ಷ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಭೀಕರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿದ್ದು ಶಾಸಕ ಸಿ.ಎಸ್.ನಾಡಗೌಡರು ಸರ್ಕಾರದ ಮೇಲೆ ಒತ್ತಡ ಹೇರಿ ತೀವ್ರ ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಸ್ಥಾನಪಡೆದುಕೊಳ್ಳಲು ಶ್ರಮಿಸಲಿದ್ದಾರೆ ಎಂದು ತಂಗಡಗಿ ವಿವಿದೋದ್ಧೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಶ್ರೀಶೈಲ್ ಮರೋಳ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದ ಶ್ರೀ ಚರಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಸಂಘದ 78 ನೇ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ:                       ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ ವ್ಯವಹಾರಗಳ ಬಗ್ಗೆ ಕೂಲಂಕಷ ತನಿಖೆ ನಡೆಸಲು ಅವರ ಮೇಲೆ ಕ್ರಿಮಿನಲ್ ದಾವೆ ಹೂಡಲು ಸಂಘ ತೀರ್ಮಾನಿಸಿದೆ ಎಂದು ಬಸರಕೋಡ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹೇಳಿದರು. ತಾಲೂಕಿನ ಬಸರಕೋಡದ ಶ್ರೀ ಪವಾಡ ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ ಸೋಮವಾರ ಬಸರಕೋಡ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ