ಬೆಂಗಳೂರು, ಜುಲೈ 17: ಧಾರವಾಡ ಕೃಷಿ ಬೆಳೆ ವಿಮಾ ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ವಿಕಾಸಸೌಧದಲ್ಲಿ ಉನ್ನತಮಟ್ಟದ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿಆರ್‌ಜೆ, ಧಾರವಾಡ ಉಪ ವಿಭಾಗಾಧಿಕಾರಿಗಳಾದ ಶ್ರೀ ಶಾಲಂ ಹುಸೇನ್, ಕಂದಾಯ ಇಲಾಖೆ ಆಯುಕ್ತರಾದ ಪೊಮ್ಮಲ ಸುನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯ, ಕೃಷಿ ಆಯುಕ್ತ ವೈ ಎಸ್ ಪಾಟೀಲ್, ಕೃಷಿ ಇಲಾಖೆಯ ಇತರ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಾಗುವಳಿದಾರರಿಗೆ ಭೂಮಿ ಮಂಜೂರು: ಹಿರಿಯ ಅಧಿಕಾರಿಗಳ ಸಭೆ : ಧಾರವಾಡ ಜಿಲ್ಲೆಯ ವಿವಿಧ ಟೆನೆಂಟ್ ಫಾರ್ಮಿಂಗ್ ಸೊಸೈಟಿಗಳಿಗೆ ಗುತ್ತಿಗೆ ಮೇಲೆ ನೀಡಲಾಗಿದ್ದ ಜಮೀನನ್ನು ಸಾಗುವಳಿದಾರರಿಗೆ ಮಂಜೂರು ಮಾಡುವ ಸಂಬಂಧ ಸಚಿವ ಸಂತೋಷ್ ಲಾಡ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.