ಧಾರವಾಡ ಕೃಷಿ ವಿವಿ ನೇಮಕ: ಕೃಷಿ ಸಂಶೋಧನಾ ಪರಿಷತ್‌ಗೆ ಹೇಮರೆಡ್ಡಿ ಮೇಟಿ ನಾಮನಿರ್ದೇಶನ

ಧಾರವಾಡ ಕೃಷಿ ವಿವಿ ನೇಮಕ: ಕೃಷಿ ಸಂಶೋಧನಾ ಪರಿಷತ್‌ಗೆ ಹೇಮರೆಡ್ಡಿ ಮೇಟಿ ನಾಮನಿರ್ದೇಶನ

ಮುದ್ದೇಬಿಹಾಳ : ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಶೋಧನಾ ಪರಿಷತ್‌ನ ನಾಮನಿರ್ದೇಶಿತ ಸದಸ್ಯರಾಗಿ ಮುದ್ದೇಬಿಹಾಳ ತಾಲ್ಲೂಕು ಬಸರಕೋಡದ ಪ್ರಗತಿಪರ ರೈತ, ಪಿ.ಕೆ.ಪಿಎಸ್ ಅಧ್ಯಕ್ಷರಾದ ಹೇಮರೆಡ್ಡಿ ಬ.ಮೇಟಿ ನೇಮಕಗೊಳಿಸಿ ಧಾರವಾಡ ಯುಎಎಸ್‌ನ ರಜಿಸ್ಟಾçರ್ ಜಯಲಕ್ಷಿö್ಮÃ ಆದೇಶಿಸಿದ್ದಾರೆ.

ಈಚೇಗೆ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಅವರು ಬಸರಕೋಡ ಭಾಗಕ್ಕೆ ಆಗಮಿಸಿದ ಸಮಯದಲ್ಲಿ ಮೇಟಿ ಅವರು ಕೈಗೊಂಡಿರುವ ಕೃಷಿ ಕ್ಷೇತ್ರದಲ್ಲಿನ ಸಾಧನೆಯ ಬಗ್ಗೆ ತಿಳಿದುಕೊಂಡಿದ್ದರು.ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ಕೃಷಿ ಪರಿಷತ್‌ನಲ್ಲಿ ಬೆಂಗಳೂರು, ಧಾರವಾಡ, ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಸುಮಾರು 45ಕ್ಕೂ ಹೆಚ್ಚು ಅಧಿಕಾರಿಗಳು,ವಿಜ್ಞಾನಿಗಳು, ಸಂಶೋಧಕರು ಇದ್ದಾರೆ.ರಾಜ್ಯದ ಇಬ್ಬರು ಪ್ರಗತಿಪರ ರೈತರಲ್ಲಿ ಮೇಟಿ ಒಬ್ಬರೂ ಇರುವುದು ವಿಶೇಷವಾಗಿದೆ.ಕೃಷಿ ಕ್ಷೇತ್ರದಲ್ಲಿ ಬೆಳೆಗಳು, ಮಣ್ಣು, ನೀರು , ಪೋಷಕಾಂಶಗಳ ಕುರಿತು ಸಲಹೆ ಸೂಚನೆ ನೀಡುವುದು ಈ ಪರಿಷತ್‌ನ ಕಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಗತಿಪರ ರೈತ ಹೇಮರಡ್ಡಿ ಮೇಟಿ ಅವರು ಬಸರಕೋಡದಲ್ಲಿ 36 ಎಕರೆ ಪ್ರದೇಶದಲ್ಲಿ ದ್ರಾಕ್ಷಿ, 32 ಎಕರೆ ಪ್ರದೇಶದಲ್ಲಿ ಪೇರು, 20ಎಕರೆ ಪ್ರದೇಶದಲ್ಲಿ ಬಾಳೆ, 22 ಎಕರೆ ಪ್ರದೇಶದಲ್ಲಿ ನುಗ್ಗೆ, 10 ಎಕರೆ ಪ್ರದೇಶದಲ್ಲಿ ಮಾವು, 50-60 ಗೀರ್ ತಳಿಯ ಆಕಳುಗಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆ.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ