Dilapidated school building: Minister Santosh Lad instructs for alternative arrangement

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಧಾರವಾಡ, ಜುಲೈ 30: ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಸೂಚಿಸಿದ್ದಾರೆ.

ಈ ಸಂಬಂಧ ಅವರು, ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಹಾಗೂ ಧಾರವಾಡದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶರಿಗೆ ಪತ್ರ ಬರೆದಿದ್ದಾರೆ.

ಧಾರವಾಡ ಮತ್ತು ಇತರೆ ಪ್ರದೇಶಗಳಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿರುವುದು ಗಮನಕ್ಕೆ ಬಂದಿದೆ. ಕಲಘಟಗಿ ಕ್ಷೇತ್ರದ ಪ್ರವಾಸದಲ್ಲಿದ್ದಾಗ ಕೊಠಡಿಗಳು ಶಿಥಿಲಗೊಂಡಿರುವುದು ಗಮನಿಸಿದ್ದೇನೆ. ಇಂತಹ ಕೊಠಡಿಗಳು ಮಕ್ಕಳಿಗೆ ಸೂಕ್ತವಲ್ಲ ಎಂದಿರುವ ಅವರು, ಪರ್ಯಾಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ತಾಂತ್ರಿಕ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿ ವಿವರ ವರದಿಯೊಂದಿಗೆ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಾಲಮಿತಿಯಲ್ಲಿ ಸಲ್ಲಿಸಲು ಸಚಿವರು ಸೂಚಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು