SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್ ಪರೀಕ್ಷೆಯ ರ್ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರೂಪಾಯಿ ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

ಮೆರಿಟ್ ಸೀಟು ಪಡೆದವರಿಗೆ ಸಿಗೋದು ₹2 ಲಕ್ಷ!

ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡ ಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ