Discussion on problems of factory workers by Minister Lad

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.

ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:
ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ಆಡಳಿತ ಮಂಡಳಿಯವರಿಗೆ ಸಚಿವರು ಸೂಚಿಸಿದರು.

ಗೃಹ ಕಾರ್ಮಿಕರ ಸಮಸ್ಯೆ ಚರ್ಚೆ:
ಕರ್ನಾಟಕ ಗೃಹ ಕಾರ್ಮಿಕರ ವೇದಿಕೆ ಬೆಂಗಳೂರು ಇವರ ಮನವಿ ಮೇರೆಗೆ ಸಚಿವ ಲಾಡ್‌ ಅವರು, ಗೃಹ ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಎಂವಿ ಫೋಟೋ ಒಲ್ಟಾಯಿಕ್ ಪವರ್ ಕಾರ್ಮಿಕರ ಸಮಸ್ಯೆ ಚರ್ಚೆ:
ಹಾಗೆಯೇ ಎಂವಿ ಫೋಟೋ ಒಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಎಲ್ಲಾ ಸಭೆಗಳಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಗೃಹ ಕಾರ್ಮಿಕ ವೇದಿಕೆಯ ಪ್ರಮುಖರು, ಕಂಪನಿಯ ಆಡಳಿತ ಮಂಡಳಿ ಮುಖ್ಯಸ್ಥರು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ