ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ ಮೆದಕಿನಾಳ, ರಾಜೇಶ್ವರಿ ನಾಡಗೌಡ ಇದ್ದರು. ಮುದ್ದೇಬಿಹಾಳ ತಾಲೂಕಿನ ಎಲ್ಲಾ ಪಿಆರ್‌ಗಳು ಬೆಳೆ ಸಮೀಕ್ಷೆದಾರರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಪದಾಧಿಕಾರಿಗಳು ಇದ್ದರು.