Distribution of smart cards to 91 categories of unorganized workers: Labor Minister Lad

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ‌ಮೇಲಿನ ಸೆಸ್ ನಲ್ಲಿ ಒಂದಂಶ ಪಡೆದು ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ಮೈಸೂರು ಜಿಲ್ಲೆಯ ವಿವಿಧ ಸಂಘಟಿತ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ 25.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಸಾರಿಗೆ ವಲಯದಲ್ಲಿ 10.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಪತ್ರಿಕಾ ವಿತರಕರ ವರ್ಗದಲ್ಲಿ 7 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು.

ಸಾರಿಗೆ ವಲಯದಲ್ಲಿ ಅಪಘಾತ ಆಗಿ ಮರಣ ಹೊಂದಿದರೆ 5 ಲಕ್ಷ ಅಪಘಾತ ವಿಮೆ ನೀಡಲಾಗುತ್ತದೆ. ಇತರೆ ವರ್ಗದ ಕಾರ್ಮಿಕರು ಅಪಘಾತ ಆಗಿ ಮರಣ ಹೊಂದಿದರೆ 1 ಲಕ್ಷ ಅಪಘಾತ ವಿಮೆ, ಶಾಶ್ವತ ಅಂಗವಿಕಲತೆ ಉಂಟಾದರೆ 1 ಲಕ್ಷ , ಆಸ್ಪತ್ರೆ ವೆಚ್ಚ ಮರುಪಾವತಿ 50 ಸಾವಿರ, ಸಹಜ ಸಾವು ಸಂಭವಿಸಿದರೆ 10 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿ ಇದೆ.‌ ಜಿಎಸ್ ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್ ಸಿ/ ಎಸ್ ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ 7500 ವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಢ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಚಾಮರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಚಾಮರಾಜ ಕ್ಷೇತ್ರದಲ್ಲಿ 60 ಸಾವಿರ ಅಸಂಘಟಿತ ಕಾರ್ಮಿಕರಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ರಾಜ್ಯವ್ಯಾಪಿ ಪ್ರಚಾರ ನಡೆಸಬೇಕಿದೆ ಎಂದು ಹೇಳಿದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರು ವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ರವಿಶಂಕರ್ .ಡಿ, ವಿಧಾನ ಪರಿಷತ್ತಿನ ಶಾಸಕರಾದ ಡಾ. ಯತೀಂದ್ರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯಕೇಶ್ ಕುಮಾರ್, ಅಪರ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ. ಎಸ್. ಬಿ ರವಿಕುಮಾರ್ , ಕಾರ್ಮಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು