
ಮುದ್ದೇಬಿಹಾಳ : ತಾಲ್ಲೂಕಿನ ಮೂವರು ಸಾಧಕರಿಗೆ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ.ಸಾಮಾಜಿಕ ಸೇವಾ ಕ್ಷೇತ್ರದಿಂದ ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ, ಸಂಕೀರ್ಣ ಕ್ಷೇತ್ರದಿಂದ ಕನ್ನಡ ಜಾನಪದ ತಾಲ್ಲೂಕು ಘಟಕದ ಅಧ್ಯಕ್ಷ ಅವಲೇಸಾ ಮುಲ್ಲಾ, ಮಲ್ಲಿಕಾರ್ಜುನ ಎನ್.ಸೊನ್ನದ ಪತ್ರಿಕೋದ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.
