Lokayukta vs DKS: BIG SHOCK for DCM DK Shivakumar after CM

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

Join Our Telegram: https://t.me/dcgkannada

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು.

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ